← All wisdom
ಅಂಗದಲ್ಲಿ ಲಿಂಗಸಂಗ ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ ಸಂದು ಭೇದವಳಿವ ಪರಿ ಎಂತು ಹೇಳಾ ಅಂಗದಲ್ಲಿ ಸಂಗವ ಮಾಡಿಹೆನೆಂದಡೆ ಮುಂದುಗೆಡಿಸಿ ಕಾಡುವನು ಶಿವನು. ಕಾಮವೆಂಬ ಬಯಕೆಯಲ್ಲಿ ಅಳಲಿಸುವ ಬಳಲಿಸುವ ಶಿವನು. ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು. ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು. ಕೂಡಲಸಂಗಮದೇವರ ಬೆರಸುವಡೆ ಬ್ಥಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.
ಅನುವಾದ ಬರಲಿದೆ · Translation coming soon
ಬಸವಣ್ಣನ ವಚನಗಳು
Samagra Vachana Samputa (15 vols.), Kannada Pustaka Pradhikara, Government of Karnataka
Digitization: Kannada Wikisource (CC-BY)
This entry is part of the Wisdom Atlas open dataset, released under CC-BY-SA-4.0. Translations marked "Open Wisdom" are original to this project. Original texts are from public domain sources.